ಸುದ್ದಿ ಜಗತ್ತು

ಬಿಗ್ ಬ್ರೆಕಿಂಗ್: ರಣಜಿ ಆಟಗಾರನ ಮೇಲೆ,ಹ್ಯಾರಿಸ್ ಪುತ್ರ ನಲಪಾಡ್ ಗುಂಡಾಗಿರಿ.

ಬೆಂಗಳೂರು: ರಣಜಿ ಕ್ರಿಕೆಟ್ ಆಟಗಾರ ಅಯ್ಯಪ್ಪ ಮೇಲೆ ಶಾಂತಿನಗರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ರೌಡಿ ನಲಪಾಡ್ ಹಲ್ಲೆ ಮಾಡಿದ್ದಾನೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

ವಿದ್ವತ್ ಅವರನ್ನು ನೋಡಲು ಮಲ್ಯ ಆಸ್ಪತ್ರೆಗೆ ತೆರೆಳಿದ್ದ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿ, ಸ್ಟಾರ್ ಹೋಟೆಲ್ ಒಂದರಲ್ಲಿ ಪಾರ್ಟಿ ನಡೆಯುತ್ತಿದ್ದಾಗ ಬಿಯರ್ ಬಾಟಲ್‍ನಲ್ಲಿ ರಣಜಿ ಪ್ಲೇಯರ್ ಅಯ್ಯಪ್ಪ ಅವರ ಮೇಲೆ ನಲಪಾಡ್ ಮಾರಣಾಂತಿಕ ಹಲ್ಲೆ ನಡೆಸಿದ್ದ ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದೂರನ್ನು ನೀಡಿರಲಿಲ್ಲ ಎಂದು ತಿಳಿಸಿದರು.

ವಿದ್ವತ್ ಅವರ ಆರೋಗ್ಯ ಸ್ಥಿತಿ ಈಗ ಸುಧಾರಿಸಿದೆ ಎಂದು ವೈದ್ಯರು ಹೇಳಿದ್ದಾರೆ. ಕಾಂಗ್ರೆಸ್‍ನ ಗೂಂಡಾಗಿರಿ ನೋಡುತ್ತಿದ್ದರೆ ನಮಗೆ ಭಯವಾಗುತ್ತೆ. ಹಲವು ವರ್ಷಗಳಿಂದ ಕಾಂಗ್ರೆಸಿಗರಿಂದ ಹಲ್ಲೆ ನಡೆಯುತ್ತಿರುವ ಬಗ್ಗೆ ಹಲವಾರು ಬಾರಿ ವರದಿಗಳು ಬಂದಿದೆ ಎಂದು ಹೇಳಿದರು.

ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಮೇಲೆ ಗೂಂಡಾಗಿರಿ ಸಂಪೂರ್ಣವಾಗಿ ನೆಲಕಚ್ಚಿದೆ. ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಈ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ನಿಲ್ಲಿಸಬಹುದು. ನಟ ಶಿವರಾಜ್ ಕುಮಾರ್ ಅವರಿಗೂ ಸಹ ಕಾಂಗ್ರೆಸ್‍ನ ಈ ವರ್ತನೆ ಭಯವನ್ನುಂಟು ಮಾಡಿದೆ. ತಂದೆ-ತಾಯಿಯಾದವರು ಯಾವಾಗಲು ಮಕ್ಕಳನ್ನ ಹತೋಟಿಯಲ್ಲಿ ಇಟ್ಟುಕೊಳ್ಳಬೇಕು ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.