ಸುದ್ದಿ ಜಗತ್ತು

ಬಿಗ್ ಬ್ರೇಕಿಂಗ್: ರೌಡಿ ನಲಪಾಡ್ ಜಾಮೀನು ಮತ್ತೊಮ್ಮೆ ತಿರಸ್ಕೃತ.

ಬೆಂಗಳೂರು, ಮಾರ್ಚ್ 02 : ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್‌ ಜಾಮೀನು ಅರ್ಜಿ ವಜಾಗೊಂಡಿದೆ. ಮೊಹಮ್ಮದ್ ನಲಪಾಡ್‌ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ.

ಶುಕ್ರವಾರ ಬೆಂಗಳೂರಿನ 63ನೇ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಬಿ. ಅವರು ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. ಮೊಹಮ್ಮದ್ ನಲಪಾಡ್‌ ಸೇರಿದಂತೆ ಎಲ್ಲಾ 7 ಆರೋಪಿಗಳ ಜಾಮೀನು ಅರ್ಜಿ ತಿರಸ್ಕಾರವಾಗಿದೆ.