ಸುದ್ದಿ ಜಗತ್ತು

ಸಿದ್ದರಾಮಯ್ಯ ಈ ದೇಶದ ಅತಿದೊಡ್ಡ ಭಯೋತ್ಪಾದಕ. ನಳಿನ್ ಕುಮಾರ್ ಕಟೀಲ್.

ಮುಖ್ಯಮಂತ್ರಿ ಸಿದ್ದರಾಮಯ್ಯ ದೇಶದ ಭಯೋತ್ಪಾದಕ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ಜನಸುರಕ್ಷಾ ಯಾತ್ರೆ ‘ಮಂಗಳೂರು ಚಲೋ’ ದ ಅಂಗವಾಗಿ ಬಿ.ಸಿ.ರೋಡಿನಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ನಾಳೆ ಚರ್ಚೆ ಆಗಬಹುದು. ಈ ಮಾತನ್ನು ಜವಾಬ್ದಾರಿಯಿಂದ ಹೇಳಿದ್ದೇನೆ. ಜಯಂತಿಯ ಹೆಸರಿನಲ್ಲಿ ಹಿಂದೂ-ಮುಸ್ಲಿಂ ನಡುವೆ ವಿಷ ಬೀಜವನ್ನು ಬಿತ್ತುವ ಮೂಲಕ ಭಯದ ವಾತಾವರಣವನ್ನು ಸೃಷ್ಠಿ ಮಾಡಿದ್ದಾರೆ. 28 ಹಿಂದೂ ಕಾರ್ಯಕರ್ತರ ಕೊಲೆಯಾದಾಗ ಮಾತನಾಡದ ಸಿದ್ದರಾಮಯ್ಯ ಭಯೋತ್ಪಾದಕ ಅಲ್ಲದೆ ಮತ್ತೇನು? ಎಂದು ಪ್ರಶ್ನಿಸಿದ್ದಾರೆ.

ಸಂಸದ ಪ್ರಹ್ಲಾದ್ ಜೋಶಿ, ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಪಕ್ಷದ ಮುಖಂಡರಾದ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಜಿ.ಆನಂದ, ಪದ್ಮನಾಭ ಕೊಟ್ಟಾರಿ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.